ಶಿಕ್ಷಕರ ದಿನಾಚರಣೆ

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಗಳು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು. ಸಂಸ್ಕೃತ ಭಾಷಾ ಉಪನ್ಯಾಸಕರಾದ ರಘು ಬಿಜೂರು ಅವರು ತಮ್ಮ ತಂಡದ ವತಿಯಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅನೇಕ ಉಪನ್ಯಾಸಕರು ತಂಡಗಳಾಗಿ ವೈವಿದ್ಯಮಯ ಕಾರ್ಯಕ್ರಮಗಳ ಜೊತೆಗೆ ಇಂಪಾದ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿ, ಪೋಷಕರ ಮನರಂಜಿಸಿದರು. ವಿನೂತನ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದ್ದ ಈ ಸಾಂಸ್ಕೃತಿಕ ಹಬ್ಬದಲ್ಲಿ ನಿಲಯ ಪಾಲಕರು ಮತ್ತು ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದು ಗಮನ ಸೆಳೆಯಿತು.